ಬೆಂಗಳೂರು: ಕೆಪಿಎಸ್‌ಸಿ ನಡೆಸಿದ ಗೆಜೆಟೆಡ್ ಪ್ರಬೋಷನರಿ 384 ಹುದ್ದೆಗಳ ಪರೀಕ್ಷೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಧಾನಸೌಧದ ಚರ್ಚೆಯಲ್ಲಿ ಮಾತನಾಡಿದರು ಅವರು, ಪರೀಕ್ಷೆ ಲೋಪದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಹೇಳಿದರು.
ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಸಾಧ್ಯ ಎಂದರು.
ಮರು ಪರೀಕ್ಷೆ ಬಗ್ಗೆ ಕೋರ್ಟ್ ಸೂಚನೆ ಬರದಿದ್ದರೆ ಸರ್ವ ಪಕ್ಷ ಸಭೆ ಕರೆದು ಚರ್ಚಿಸಲಾಗುವುದು. ಇದೇ ಸಂಧರ್ಭದಲ್ಲಿ ತಪ್ಪು ಭಾಷಾಂತರದಿಂದ ಅನ್ಯಾಯಕ್ಕೆ ಒಳಗಾದವರ ಪರವಾಗಿ ನಾವಿದ್ದೇವೆ ಎಂದು ಹೇಳಿದರು.
ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರ ಹೊರಗೆ ಹಾಕಬೇಕು.ಇದರ ಬಗ್ಗೆ ಎರಡು ಮಾತಿಲ್ಲ. ಮುಂದೆ UPSC ಮಾದರಿಯಲ್ಲಿ KPSC ಪರೀಕ್ಷೆ , ನೇಮಕಾತಿ ನಡೆಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.





