Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಬಲಿದಾನ ಮಾಡಲು ಸಿದ್ದರಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ !

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್​ಡಿಪಿಐ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಸಂಘರ್ಷ, ತ್ಯಾಗ, ಬಲಿದಾನಗಳಿಗೆ ಸಿದ್ಧರಾಗದಿದ್ದರೆ ನಮ್ಮ ಹಕ್ಕುಗಳು ನಮಗೆ ದೊರಕುವುದು ಕನಸಿನ ಮಾತು.

ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಸಾಧ್ಯವಿಲ್ಲ. ಆದ್ದರಿಂದ ನಾವು ಬೀದಿಗಿಳಿದು ಹೋರಾಡಲೇಬೇಕು ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದ್ದು, ಕಾನೂನು ಇಲ್ಲವೇ ಎಂಬಂತಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮತ್ತು ಎಎಪಿ ಮೌನವಹಿಸಿರೋದು ಖಂಡನೀಯ. ನಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ರಸ್ತೆಗೆ ಇಳಿಯಬೇಕು ಎಂದು ಅಬ್ದುಲ್ ಮಜೀದ್ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ