ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಸಂಘರ್ಷ, ತ್ಯಾಗ, ಬಲಿದಾನಗಳಿಗೆ ಸಿದ್ಧರಾಗದಿದ್ದರೆ ನಮ್ಮ ಹಕ್ಕುಗಳು ನಮಗೆ ದೊರಕುವುದು ಕನಸಿನ ಮಾತು.
ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಸಾಧ್ಯವಿಲ್ಲ. ಆದ್ದರಿಂದ ನಾವು ಬೀದಿಗಿಳಿದು ಹೋರಾಡಲೇಬೇಕು ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದ್ದು, ಕಾನೂನು ಇಲ್ಲವೇ ಎಂಬಂತಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮತ್ತು ಎಎಪಿ ಮೌನವಹಿಸಿರೋದು ಖಂಡನೀಯ. ನಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ರಸ್ತೆಗೆ ಇಳಿಯಬೇಕು ಎಂದು ಅಬ್ದುಲ್ ಮಜೀದ್ ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…