ರಾಜ್ಯ

ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು.

ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದೆ. ಹಾಗಾಗಿ ಘಾಟಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದೇನೆ. ನಾನು 30 ವರ್ಷದ ಹಿಂದೆ ಇಲ್ಲಿ ಸರ್ಪ ಸಂಸ್ಕಾರ ಮಾಡಿಸಿದ್ದೇನೆ. ದೇವಾಲಯದ ಅಭಿವೃದ್ಧಿಯನ್ನು ಸಹ ಮಾಡಲಾಗುವುದು ಎಂದು ಹೇಳಿದರು.

ಇನ್ನು ಜಾತಿಗಣತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ವರದಿಯನ್ನು ನೋಡಿಲ್ಲ. ಅದು ಕ್ಯಾಬಿನೆಟ್‌ನಲ್ಲಿ ಚರ್ಚೆ ಆಗಬೇಕು. ಆತುರದ ನಿರ್ಧಾರವನ್ನು ಯಾರೂ ತೆಗೆದುಕೊಳ್ಳುವುದಿಲ್ಲ. ಕೆಲವರು ರಾಜಕೀಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

46 mins ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

58 mins ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

2 hours ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

11 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

11 hours ago