ರಾಜ್ಯ

ಹಾಸ್ಟಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ಬಾಲಕಿ ; 6 ಮಂದಿ ವಿರುದ್ಧ ಎಫ್‌ಐಆರ್‌

ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ.

ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್‌ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು ಕಾರಣವಾದ ಆರೋಪದ ಮೇಕೆ ಯುವಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ರಕ್ಷಣೆಗೆ ನಿಗಾ ವಹಿಸದ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾಗಿದ್ದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್‌ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ

ಆರೋಪಿ ಹನುಮನಗೌಡ, ಶಶಿಕಲಾ, ಶಿಕ್ಷಕರಾದ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕುಕನೂರು ತಂಡದ ವೈದ್ಯಾಧಿಕಾರಿಗಳಾದ ಭರತೇಶ ಹಿರೇಮಠ ಹಾಗೂ ಸಬೀಯಾ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ವಸತಿ ನಿಲಯವಿರುವ ಗ್ರಾಮದ ಶಾಲೆಯಲ್ಲಿ ಎಂಟನೇ ತರಗತಿಯಿಂದಲೇ ಓದುತ್ತಿರುವ ಬಾಲಕಿಗೆ ಆರೋಪಿ ಮೊದಲಿನಿಂದ ಪರಿಚಿತನಾಗಿದ್ದ. ಹನುಮನಗೌಡ ನನ್ನನ್ನು ಪ್ರೀತಿಸುತ್ತಿದ್ದ. ಮುಂದೆ ಮದುವೆಯಾಗುವುದಾಗಿ ಹೇಳಿ ಶಾಲೆ ಬಿಟ್ಟ ನಂತರ ಹಲವು ಬಾರಿ ಆತ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಬುಧವಾರ ಬೆಳಿಗ್ಗೆ 5.30ರ ಸುಮಾರಿಗೆ ಬಾಲಕಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಶೌಚಾಲಯಕ್ಕೆ ತೆರಳಿದಾಗ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ನೀಡಿದ ದೂರಿನ ಮೇರೆಗೆ ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

25 seconds ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

10 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

58 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago