ರಾಜ್ಯ

ಇನ್ನೂ ಪತ್ತೆಯಾಗದ ಬಾಲಕಿ ಶ್ರೀನಂದಾ ; ಚಂದ್ರದ್ರೋಣ ಬೆಟ್ಟದಲ್ಲಿ ಮುಂದುವರೆದ ಶೋಧ ಕಾರ್ಯ

ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ ದಟ್ಟ ಕಾನನದಲ್ಲಿ ಕಾಣೆಯಾಗಿದ್ದು, ಎರಡು ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಶೋಧ ಕಾರ್ಯ ಮುಂದುವರೆದಿದೆ.

ಎಸ್.ಎಸ್.ಎಲ್.ಸಿ ಓದುತ್ತಿದ್ದ ಬಾಲಕಿ ಶ್ರೀನಂದಾ ಮಂಗಳವಾರ ಸಂಜೆ 5.30 ಕ್ಕೆ ನಾಪತ್ತೆಯಾಗಿದ್ದಾಳೆ. ಘಟನೆಯ ತೀವ್ರತೆಯನ್ನು ಅರಿತ ಸಚಿವರು, ಕೇವಲ ಪೊಲೀಸ್ ಮತ್ತು ಜಿಲ್ಲಾಡಳಿತವಷ್ಟೇ ಅಲ್ಲದೇ, ದಟ್ಟ ಅರಣ್ಯದಲ್ಲಿ ಸಂಚರಿಸಲು ಪರಿಣಿತಿ ಹೊಂದಿರುವ ಅರಣ್ಯ ಇಲಾಖೆಯ ವಿಶೇಷ ತಂಡವನ್ನು ಕಳುಹಿಸಿದ್ದಾರೆ.

ಬಾಲಕಿ ನಾಪತ್ತೆಯಾದ ಸ್ಥಳವು ಅತ್ಯಂತ ಕಡಿದಾದ ಗುಡ್ಡಗಳಿಂದ ಕೂಡಿದೆ. ಆ ಪ್ರದೇಶವು ತಾಂತ್ರಿಕವಾಗಿ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರದಿದ್ದರೂ, ಬಾಲಕಿಯ ಪ್ರಾಣ ಉಳಿಸುವ ದೃಷ್ಟಿಯಿಂದ ಇಲಾಖೆಯ ಬೆಂಬಲ ಅತ್ಯಗತ್ಯ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಚಿವರು, ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದಟ್ಟವಾದ ಗಿಡಗಂಟಿಗಳು ಮತ್ತು ಗುಡ್ಡಗಾಡು ಪ್ರದೇಶವಾಗಿರುವುದರಿಂದ, ಮನುಷ್ಯನ ಕಣ್ಣಿಗೆ ನಿಲುಕದ ಜಾಗಗಳನ್ನು ಪತ್ತೆಹಚ್ಚಲು ಥರ್ಮಲ್ ಸೆನ್ಸರ್ ಇರುವ ಡ್ರೋನ್ ಗಳನ್ನು ಬಳಸಲು ಸೂಚಿಸಲಾಗಿದೆ. ಅರಣ್ಯ ಇಲಾಖೆಯ ನುರಿತ ಸಿಬ್ಬಂದಿ ಈಗ ಪೊಲೀಸ್ ಪಡೆಯೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕಾರ್ಯಾಚರಣೆ ನಡೆಸಲಿದ್ದಾರೆ.

ಸವಾಲಿನ ಹಾದಿ
ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಏ.7ರ ಮಧ್ಯರಾತ್ರಿ 1 ಗಂಟೆವರೆಗೆ ಹುಡುಕಾಡಿದ್ದಾರೆ. ಆದರೆ, ಆಕೆಯ ಸುಳಿವು ಸಿಕ್ಕಿಲ್ಲ. ಕಗ್ಗತ್ತಲು, ದಟ್ಟ ಕಾನನ, ಬೆಟ್ಟ-ಗುಡ್ಡಗಳ ಇಳಿಜಾರು ಪ್ರದೇಶ ಆಗಿದ್ದರಿಂದ ಕಾರ್ಯಾಚರಣೆ ಕೈಬಿಟ್ಟ ಅಧಿಕಾರಿಗಳು ಏ.8ರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ಮುಂದುವರೆಸಿದ್ದರು. ಇದೀಗ, ಶೋಧ ಕಾರ್ಯಕ್ಕೆ ಎಸ್.ಡಿ.ಆರ್.ಎಫ್ ತಂಡ ಕೂಡ ಜೊತೆಗೂಡಿದೆ.

ಬೆಳಗಿನ ಜಾವ 5 ಗಂಟೆಯಿಂದಲೇ ಶೋಧ ಕಾರ್ಯ ಆರಂಭಿಸಿದ ಸಿಬ್ಬಂದಿ ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಮುಂದಾಗಿದ್ದಾರೆ. ಮೂರು ಇಲಾಖೆಯ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿದ್ದಾರೆ. ಬಾಲಕಿ ನಾಪತ್ತೆಯಾದ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತದೆಯೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡುತ್ತಿದೆ. ಆದರೆ, ಜಾರಿದ್ದಾಳೆ ಎನ್ನವುದಕ್ಕೆ ಮಳೆ ಇಲ್ಲ. ಕಾಡು ಬೇಸಿಗೆಗೆ ಒಣಗಿ ಬಿಡಿಬಿಡಿಯಾಗಿದೆ. ನಾಪತ್ತೆಯಾದ ಒಂದು ಗಂಟೆಯಿಂದಲೇ ಹತ್ತಾರು ಜನ ಹುಡುಕಾಡಿದರೂ ಸಿಗದಿರೋದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

11 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

11 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

11 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

11 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

12 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

12 hours ago