ರಾಜ್ಯ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,
ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಇನ್ನು ರಾಜ್ಯ ಸರ್ಕಾರ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago