Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

mallikarjun kharge

ನವದೆಹಲಿ: ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎಂದು ಎನ್‌ಡಿಎ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬಿಹಾರದಲ್ಲಿ ಮಹಾಘಟಬಂಧನ್‌ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಏಳಿಗೆಗಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಹೇಳಿದರು.

ಬಿಹಾರದಲ್ಲಿ ಬಿಜೆಪಿ-ಜೆಡಿಯು 20 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಇಂದಿಗೂ ಬಿಹಾರದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ ಎಂದು ಆರೋಪಿಸಿದರು.

ಶೇಕಡಾ.70ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಶೇ.40ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Tags:
error: Content is protected !!