ರಾಜ್ಯ

ಪುರಷರಿಗೂ ʼಗ್ಯಾರಂಟಿʼ ಯೋಜನೆ ನೀಡಿ: ವಾಟಾಳ್ ನಾಗರಾಜ್ ಆಗ್ರಹ

ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ರಾಜ್ಯ ಸರ್ಕಾರ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ವಾಟಾಳ್ ನಾಗರಾಜ್ ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ವಿನೂತನವಾಗಿ ಚಳವಳಿ ನಡೆಸಿದರು.

ಭಾನುವಾರ ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಆವರಣಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕಾರ್ಯಕರ್ತರೊಂದಿಗೆ ಆಗಮಿಸಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪುರಷರಿಗೂ ಜಾರಿ ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೆ ಪ್ರಯಾಣ ಮಾಡಲು ಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ‘ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಪುರುಷರಿಗೂ ನೀಡಬೇಕು. ಇದರಿಂದ ಅವರ ಆದಾಯದ ಗುಣಮಟ್ಟ ಹೆಚ್ಚಾಗಲಿದೆ. ಜೊತೆಗೆ ಮಾನಸಿಕ ಶಕ್ತಿಯನ್ನು ಅವರಿಗೆ ತುಂಬಿದಂತೆ ಆಗಲಿದೆ’ ಎಂದು ಇದೇ ವೇಳೆ ಆಗ್ರಹಿಸಿದರು.

ಮನೆ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಾಗುತ್ತಿದೆ. ಅದೇ ರೀತಿ ಮನೆಯ ಯಜಮಾನನಿಗೂ ‘ನಾರಾಯಣ’ ಎನ್ನುವ ಹೆಸರಿನ ಅಡಿಯಲ್ಲಿ 2000 ರೂಪಾಯಿ ಜಾರಿ ಮಾಡಬೇಕು. ಶಕ್ತಿ ಯೋಜನೆಯ ಇದೇ ಮಾದರಿಯಲ್ಲಿ ಜಾರಿಗೆ ತರಬೇಕು ಎಂದು ಅವರು ಕೋರಿದರು.

ಐತಿಹಾಸಿಕ ಮೈಸೂರು ದಸರಾ ವೀಕ್ಷಿಸಲು ರಾಜ್ಯದ ಮೂಲೆ ಮೂಲೆಯಿಂದಲೂ ಮೈಸೂರಿಗೆ ಆಗಮಿಸಲಿದ್ದಾರೆ. ಬಸ್ ಪ್ರಯಾಣವಾಗಲಿ, ಗೃಹಲಕ್ಷ್ಮಿಯಾಗಲಿ ಬರೀ ಮಹಿಳೆಯರಿಗೆ ಮಾಡಿದ್ದೀರಿ. ಇದನ್ನು ನಾನು ವಿರೋಧಿಸುವುದಿಲ್ಲ. ಆದರೆ ಪುರುಷರಿಗೂ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಬೇಕೆಂದು ವಾಟಾಳ್ ಒತ್ತಾಯಿಸಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago