ರಾಜ್ಯ

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ (ಆ.5) ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದು ವಿವರಿಸಿದರು.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಅವರು ಹೇಳಿದರು.

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶ: ಹಾನಿಗೀಡಾದ ಮನೆಗಳಿಗೆ 6500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದರು.

ಜಿಲ್ಲೆಯಲ್ಲಿ 41706 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ, 372 ಹೆಕ್ಟೇರ್‌ ತೋಟಗಾರಿಕಾ ಬೆಳೆ ಗಳಿಗೆ ಹಾನಿ ಸಂಭವಿಸಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2962 ವಿದ್ಯುತ್‌ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್‌ ಕಂಬಗಳು ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿಯನ್ನು ಪಡೆಯಲಾಗುವುದು.

ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿರುವುದಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ 48 ಕೋಟಿ ರೂ. ಅನುದಾನ ಲಭ್ಯವಿದ್ದು, ತಹಶೀಲ್ದಾರ್‌ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

25 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

31 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago