ರಾಜ್ಯ

ಗುಜರಾತ್‌, ಮಹಾರಾಷ್ಟ್ರದಂತೆ ಕರ್ನಾಟಕಕ್ಕೂ ಹೆಚ್ಚಿನ ಪ್ರೋತ್ಸಾಹ ಕೊಡಿ: ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.

ಬೆಂಗಳೂರು ನಗರದ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆ ಹಾಗೂ 3ನೇ ಹಂತದ ಮೆಟ್ರೋ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಮಾತನಾಡಿದರು. ಪರೋಕ್ಷವಾಗಿ ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಡುತ್ತಿರುವ ಸಹಕಾರ, ಅನುದಾನ ಸಾಲುತ್ತಿಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.

ಮೆಟ್ರೋ ರೈಲ್ವೆ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ ಶೇ. 50ರ ವೆಚ್ಚದಲ್ಲಿ ಅನುಷ್ಠಾನಗೊಳ್ಳಬೇಕೆಂಬ ಒಪ್ಪಂದವಾಗಿತ್ತು. ಆದರೆ ಇಲ್ಲಿವರೆಗೂ ರಾಜ್ಯ ಸರ್ಕಾರವೇ ಹೆಚ್ಚಿನ ಹಣ ಖರ್ಚು ಮಾಡುತ್ತಿವೆ. ಕೇಂದ್ರ ಸರ್ಕಾರ ಇನ್ನು ಮುಂದಾದರೂ ಒಪ್ಪಂದದಂತೆ ಹೆಚ್ಚಿನ ಹಣ ನೀಡಲಿ ಎಂದು ಅಂಕಿ ಅಂಶಗಳನ್ನು ವಿವರಿಸಿದರು. ಮುಖ್ಯಮಂತ್ರಿಯವರ ಮಾತುಗಳನ್ನು ಪ್ರಧಾನಿಯವರು ಬಹಳ ಆಸಕ್ತಿಯಿಂದ ಆಲಿಸುತ್ತಿದ್ದದ್ದು, ಕಂಡು ಬಂತು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago