ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಫ್ರೀಡಂ ಪಾರ್ಕ್‌ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು, ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಹೊರಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ ಎಂದರು.
ಮೋದಿ ಸರ್ಕಾರ ಬಂದ ನಂತರ ಬೇಧಭಾವ ಉಂಟು ಮಾಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡುತ್ತಿದ್ದಾರೆ ಎನ್ನಲು ಇದು ಸಾಕ್ಷಿ ಎಂದರು.
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು ಎಂದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…