ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ ಬರೆದು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಮೇಲ್ಮನೆ ಸದಸ್ಯರು ತಾವೇ ಸಹಿ ಮಾಡಿದ ಪತ್ರವನ್ನ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.
ಸಂಪುಟದಲ್ಲಿ ಎಂಎಲ್‍ಸಿಗಳಿಗೆ ಪ್ರಾತಿನಿಧ್ಯ ಇಲ್ಲದಿರುವುದು ಅಸಮಾನತೆ, ನಿರುತ್ಸಾಹ ಭಾವನೆ ಉಂಟುಮಾಡುತ್ತೆ. ಇದು ಎಂಎಲ್‍ಸಿಗಳಿಗೆ ರಾಜಕೀಯ ನಿರೀಕ್ಷೆಗಳಿಲ್ಲ ಎಂಬ ಗ್ರಹಿಕೆಗೆ ಕಾರಣವಾಗುತ್ತದೆ. ಸಮರ್ಥ ನಾಯಕರು ಎಂಎಲ್‍ಸಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಬದಲು ವಿಧಾನಸಭಾ ಟಿಕೆಟ್‍ಗಳನ್ನ ಪಡೆಯಲು ಮುಂದಾಗ್ತಾರೆ. ನಂತರ ಇದು ಗುಂಪುಗಾರಿಕೆಗೆ ಕಾರಣವಾಗುತ್ತದೆ ಮತ್ತು ಪಕ್ಷದ ಸಂಘಟನೆಯನ್ನು ದುರ್ಬಲಗೊಳಿಸುತ್ತದೆ. ಎಲ್ಲಾ ಎಂಎಲ್‍ಸಿಗಳು ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಆಳವಾಗಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ವಿಧಾನ ಪರಿಷತ್ತಿನ ಕನಿಷ್ಠ 5 ಸದಸ್ಯರನ್ನ ಸಚಿವ ಸಂಪುಟದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಒಬ್ಬರು, ಪದವೀಧರ ಅಥವಾ ಶಿಕ್ಷಕರ ಕ್ಷೇತ್ರಗಳಿಂದ ಒಬ್ಬರು, ಕೆಳಮನೆ ಅಥವಾ ನಾಮನಿರ್ದೇಶಿತ ವರ್ಗದಿಂದ ಒಬ್ಬ ಎಂಎಲ್‍ಸಿಯನ್ನ ಆಯ್ಕೆ ಮಾಡುವಂತೆ ಮನವಿ ಮಾಡಿ ಪತ್ರ ಸಲ್ಲಿಸಿದ್ದಾರೆ.
ಮನವಿಯಲ್ಲಿ ಏನಿದೆ..? 1907 ರಲ್ಲಿ ಸ್ಥಾಪನೆಯಾದ ಕರ್ನಾಟಕ ವಿಧಾನ ಪರಿಷತ್ತು, ಅತ್ಯಂತ ಹಳೆಯ ಪರಿಷತ್ತುಗಳಲ್ಲಿ ಒಂದಾಗಿದೆ. 10/15 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ದೊಡ್ಡ ಪ್ರದೇಶಗಳನ್ನು ಪ್ರತಿನಿಧಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದವರು ತಳಮಟ್ಟದ ಜನರೊಂದಿಗೆ ನೇರ ಸಂಪರ್ಕದಲ್ಲಿರುವ ಪ್ರತಿನಿಧಿಗಳು. ಶಾಸಕರಿಗೆ ಹೋಲಿಸಿದರೆ ಎಂಎಲ್‍ಸಿಗಳು ವ್ಯಾಪಕ ಮತದಾರರ ಮೇಲೆ ಪ್ರಭಾವ ಬೀರುತ್ತಾರೆ. ಪಕ್ಷದ ನೆಲೆಯನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…