ರಾಜ್ಯ

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ ಬರೆದು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಮೇಲ್ಮನೆ ಸದಸ್ಯರು ತಾವೇ ಸಹಿ ಮಾಡಿದ ಪತ್ರವನ್ನ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

ಸಂಪುಟದಲ್ಲಿ ಎಂಎಲ್‍ಸಿಗಳಿಗೆ ಪ್ರಾತಿನಿಧ್ಯ ಇಲ್ಲದಿರುವುದು ಅಸಮಾನತೆ, ನಿರುತ್ಸಾಹ ಭಾವನೆ ಉಂಟುಮಾಡುತ್ತೆ. ಇದು ಎಂಎಲ್‍ಸಿಗಳಿಗೆ ರಾಜಕೀಯ ನಿರೀಕ್ಷೆಗಳಿಲ್ಲ ಎಂಬ ಗ್ರಹಿಕೆಗೆ ಕಾರಣವಾಗುತ್ತದೆ. ಸಮರ್ಥ ನಾಯಕರು ಎಂಎಲ್‍ಸಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಬದಲು ವಿಧಾನಸಭಾ ಟಿಕೆಟ್‍ಗಳನ್ನ ಪಡೆಯಲು ಮುಂದಾಗ್ತಾರೆ. ನಂತರ ಇದು ಗುಂಪುಗಾರಿಕೆಗೆ ಕಾರಣವಾಗುತ್ತದೆ ಮತ್ತು ಪಕ್ಷದ ಸಂಘಟನೆಯನ್ನು ದುರ್ಬಲಗೊಳಿಸುತ್ತದೆ. ಎಲ್ಲಾ ಎಂಎಲ್‍ಸಿಗಳು ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಆಳವಾಗಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ವಿಧಾನ ಪರಿಷತ್ತಿನ ಕನಿಷ್ಠ 5 ಸದಸ್ಯರನ್ನ ಸಚಿವ ಸಂಪುಟದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಒಬ್ಬರು, ಪದವೀಧರ ಅಥವಾ ಶಿಕ್ಷಕರ ಕ್ಷೇತ್ರಗಳಿಂದ ಒಬ್ಬರು, ಕೆಳಮನೆ ಅಥವಾ ನಾಮನಿರ್ದೇಶಿತ ವರ್ಗದಿಂದ ಒಬ್ಬ ಎಂಎಲ್‍ಸಿಯನ್ನ ಆಯ್ಕೆ ಮಾಡುವಂತೆ ಮನವಿ ಮಾಡಿ ಪತ್ರ ಸಲ್ಲಿಸಿದ್ದಾರೆ.

ಮನವಿಯಲ್ಲಿ ಏನಿದೆ..? 1907 ರಲ್ಲಿ ಸ್ಥಾಪನೆಯಾದ ಕರ್ನಾಟಕ ವಿಧಾನ ಪರಿಷತ್ತು, ಅತ್ಯಂತ ಹಳೆಯ ಪರಿಷತ್ತುಗಳಲ್ಲಿ ಒಂದಾಗಿದೆ. 10/15 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ದೊಡ್ಡ ಪ್ರದೇಶಗಳನ್ನು ಪ್ರತಿನಿಧಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದವರು ತಳಮಟ್ಟದ ಜನರೊಂದಿಗೆ ನೇರ ಸಂಪರ್ಕದಲ್ಲಿರುವ ಪ್ರತಿನಿಧಿಗಳು. ಶಾಸಕರಿಗೆ ಹೋಲಿಸಿದರೆ ಎಂಎಲ್‍ಸಿಗಳು ವ್ಯಾಪಕ ಮತದಾರರ ಮೇಲೆ ಪ್ರಭಾವ ಬೀರುತ್ತಾರೆ. ಪಕ್ಷದ ನೆಲೆಯನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago