Mysore
15
few clouds

Social Media

ಗುರುವಾರ, 22 ಜನವರಿ 2026
Light
Dark

ಜಾಗತಿಕ ಹೂಡಿಕೆದಾರರ ಸಮಾವೇಶ: ಎಂ.ಬಿ ಪಾಟೀಲ್‌ರಿಂದ ಸಿದ್ಧತೆ ಪರಿಶೀಲನೆ

ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು.

ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್‌ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರ ಆತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Tags:
error: Content is protected !!