ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು.
ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರ ಆತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…