Mysore
22
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಮನರೇಗಾ ಯೋಜನೆ ಉಳಿಸಲು ನಾಳೆ ರಾಜಭವನ ಚಲೋ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್‌ ನಾಯಕರು ನಾಳೆ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಮನರೇಗಾ ಉಳಿಸುವ ಸಲುವಾಗಿ ನಾಳೆ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿ.ಮೀ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.

ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಮನರೇಗಾವನನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

Tags:
error: Content is protected !!