ರಾಜ್ಯ

ದಸರಾ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ
ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು
ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.

ಈ ಲಕ್ಷ್ಮೀ ಹೆಬ್ಬಾಳ್ಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು.

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago