ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ(ಆ.5) ಭೇಟಿ ನೀಡಿ ಪರಿಶೀಲಿಸಿದರು.
ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.
ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.
ಇದಾದ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ ಉಂಟಾಗಿರುವ ಹಾನಿಯನ್ನು ವಿವರಿಸಿದರು.
ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಕಾಳಜಿ ಕೇಂದ್ರಕ್ಕೆ ಭೇಟಿ
ಮುಳಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ ನಗರದ ಸರಕಾರಿ ಮುನ್ಸಿಪಲ್ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ ಜತೆ ಚರ್ಚಿಸಿದರು.
ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬವರು ಸಮಾಧಾನ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…