ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾರಾವ್ ಆಪ್ತ ಮತ್ತು 2ನೇ ಆರೋಪಿಯಾಗಿರುವ ತರುಣ್ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆರ್ಥಿಕ ಅಪರಾಧಗಳ ಕೋರ್ಟ್ ಆದೇಶ ಹೊರಡಿಸಿದೆ.
ಡಿಆರ್‌ಐ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾರಾವ್ ಆಪ್ತ ತರುಣ್ ರಾಜ್ ಅವರನ್ನು ಬಂಧಿಸಿ ಕಸ್ಟಡಿಗೆ ಪಡೆದದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣನನ್ನು ಇಂದು(ಮಾರ್ಚ್.14) ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿದ್ದರು.
ಈ ಹಿನ್ನೆಲೆ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ಕೋರ್ಟ್‌ನ ನ್ಯಾಯಮೂರ್ತಿ ವಿಶ್ವನಾಥ್ ಸಿ.ಗೌಡರ್ ಅವರ ನ್ಯಾಯಪೀಠವೂ 2ನೇ ಆರೋಪಿ ತರುಣ್ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.