ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ರನ್ಯಾರಾವ್‌ ಆಪ್ತ ತರುಣ್‌ ರಾಜ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾರಾವ್‌ ಆಪ್ತ ಮತ್ತು 2ನೇ ಆರೋಪಿಯಾಗಿರುವ ತರುಣ್‌ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆರ್ಥಿಕ ಅಪರಾಧಗಳ ಕೋರ್ಟ್‌ ಆದೇಶ ಹೊರಡಿಸಿದೆ.

ಡಿಆರ್‌ಐ ಅಧಿಕಾರಿಗಳು ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾರಾವ್‌ ಆಪ್ತ ತರುಣ್‌ ರಾಜ್‌ ಅವರನ್ನು ಬಂಧಿಸಿ ಕಸ್ಟಡಿಗೆ ಪಡೆದದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣನನ್ನು ಇಂದು(ಮಾರ್ಚ್‌.14) ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿದ್ದರು.

ಈ ಹಿನ್ನೆಲೆ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ಕೋರ್ಟ್‌ನ ನ್ಯಾಯಮೂರ್ತಿ ವಿಶ್ವನಾಥ್‌ ಸಿ.ಗೌಡರ್‌ ಅವರ ನ್ಯಾಯಪೀಠವೂ 2ನೇ ಆರೋಪಿ ತರುಣ್‌ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.

AddThis Website Tools
ಅರ್ಚನ ಎಸ್‌ ಎಸ್

Recent Posts

ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಪ್ರಮಾಣ ವಚನ ಸ್ವೀಕಾರ

ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್‌ ಕಾರ್ನಿ ಬ್ಯಾಂಕ್‌…

19 mins ago

ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…

31 mins ago

ಓದುಗರ ಪತ್ರ: ಅರಳಬೇಕು ಬಾಳು ಕಲಾಕುಲುಮೆಯಲಿ!..

ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…

3 hours ago

ಓದುಗರ ಪತ್ರ: ಗ್ಯಾರಂಟಿ..?!

ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…

4 hours ago

ಓದುಗರ ಪತ್ರ: ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿ

ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…

4 hours ago

ಓದುಗರ ಪತ್ರ: ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿ

ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…

4 hours ago