ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.
ಈ ಕುರಿತು ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ತರುಣ್ ರಾಜ್‌ಗೆ ತೀವ್ರ ಬೇಸರವಾಗಿದೆ ಎನ್ನಲಾಗಿದೆ.
ನಟಿ ರನ್ಯಾ ರಾವ್ ಸ್ನೇಹಿತ ತರುಣ್ ರಾಜ್ ವಿರುದ್ಧವೂ ಡಿಆರ್‌ಐ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಈಗ ನ್ಯಾಯಾಂಗ ಬಂಧನದಲ್ಲಿರುವ ತರುಣ್ ರಾಜ್ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥ್ ಗೌಡರ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ.





