ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿರುವ ನಟಿ ರನ್ಯಾ, ಮಾರ್ಚ್.1ರಂದು ನನಗೆ ವಿದೇಶಿ ನಂಬರ್‌ನಿಂದ ಕರೆ ಬಂದಿತ್ತು. ಚಿನ್ನ ತಂದು ಡೆಲಿವರಿ ಮಾಡಬೇಕು ಎಂಬ ಸೂಚನೆ ಆ ಕರೆಯಲ್ಲಿತ್ತು. ನಂತರ ಮಾರ್ಚ್.2ರಂದು ದುಬೈಗೆ ಹೋದೆ.
ದುಬೈನಲ್ಲಿ ನನಗೆ ವಿಮಾನ ನಿಲ್ದಾಣದ ಟರ್ಮಿನಲ್ ಗೇಟ್ ಬಳಿ ಬರಲು ಸೂಚನೆ ಸಿಕ್ಕಿತ್ತು. ಈ ವೇಳೆ ನನಗೆ ವ್ಯಕ್ತಿಯೊಬ್ಬ ಬಂದು ಚಿನ್ನವಿದ್ದ ಎರಡು ಬಾಕ್ಸ್ ನೀಡಿದ.
ಬಳಿಕ ನಾನು ವಾಶ್‌ರೂಂಗೆ ಹೋಗಿ ಮೈಗೆ ಚಿನ್ನದ ಗಟ್ಟಿಗಳನ್ನು ಅಂಟಿಸಿಕೊಂಡು ಬಂದೆ. ಕಳ್ಳಸಾಗಾಣಿಕೆ ಮಾಡಬೇಕು ಎಂಬುದನ್ನು ಯೂಟ್ಯೂಬ್ ನೋಡಿ ಕಲಿತುಕೊಂಡೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.