Mysore
28
light rain

Social Media

ಬುಧವಾರ, 25 ಜೂನ್ 2025
Light
Dark

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ನಟಿ ರನ್ಯಾ ರಾವ್‌ಗೆ ಜಾಮೀನು ಮಂಜೂರು

Actress Rany Rao

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ನೀಡಿದೆ.

60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರಿಗೂ ಶ್ಯೂರಿಟಿ, 2 ಲಕ್ಷ ರೂ ಬಾಂಡ್‌ ಮೇಲೆ ಜಾಮೀನು ನೀಡಲಾಗಿದ್ದು, ದೇಶ ಬಿಟ್ಟು ಹೋಗದಂತೆ ಸೂಚನೆ ನೀಡಲಾಗಿದೆ.

12 ಕೋಟಿ ರೂ ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ನಟಿ ರನ್ಯಾ ರಾವ್‌ ಬಂಧನಕ್ಕೆ ಒಳಗಾಗಿದ್ದರು. ಈ ಹಿಂದೆ ರನ್ಯಾ ರಾವ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮತ್ತು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ತಿರಸ್ಕಾರ ಮಾಡಿತ್ತು.

Tags:
error: Content is protected !!