Actress Rany Rao
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುಗೂ ಜಾಮೀನು ನೀಡಿದೆ.
60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರಿಗೂ ಶ್ಯೂರಿಟಿ, 2 ಲಕ್ಷ ರೂ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ದೇಶ ಬಿಟ್ಟು ಹೋಗದಂತೆ ಸೂಚನೆ ನೀಡಲಾಗಿದೆ.
12 ಕೋಟಿ ರೂ ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದರು. ಈ ಹಿಂದೆ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕಾರ ಮಾಡಿತ್ತು.
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…