ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಂಧನವಾಗಿದೆ. ಡಿಆರ್‌ಐ(ಕಂದಾಯ ಗುಪ್ತಚರ ನಿರ್ದೇಶನಾಲಯ)ಅಧಿಕಾರಿಗಳು ನಟಿಯನ್ನು ಬಂಧಿಸಿದ್ದು, ಇದೀಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ವಿದೇಶಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ನಟಿ, ಚಿನ್ನ ಕಳ್ಳಸಾಗಣಿಕೆ ಕೇಸ್‌ನಲ್ಲಿ ಸಿಕ್ಕಿಹಾಕಿಹೊಂಡಿದ್ದಾರೆ. ಈ ನಡುವೆ ಖ್ಯಾತ ರಾಜಕಾರಣಿಯೊಬ್ಬರ ಹೆಸರು ಕೂಡು ಕೇಸ್‌ನಲ್ಲಿ ತುಳುಕುಹಾಕಿಕೊಂಡಿದ್ದು, ಆ ರಾಜಕಾರಣಿಗೆ ನೀಡುವುದಕ್ಕಾಗಿಯೇ ನಟಿ ಚಿನ್ನ ಖರೀದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯ ತನಿಖಾ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ರಾಜಕಾರಣಿಯ ಬೆನ್ನು ಬೀಳಲು ಸಿದ್ಧತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ನಟಿ ರನ್ಯಾ ರಾವ್ ಅವರು, ಅಧಿಕಾರಿಗಳಿಗೆ ನೀಡಿರುವ ಹೇಳಿಕೆಯಲ್ಲಿ ತಮ್ಮ ಹೆಸರನ್ನು ಹರ್ಷವರ್ಧಿನಿ ರನ್ಯಾ, ಉದ್ಯಮಿ ಕೆ.ಎಸ್ ಹೆಗ್ದೇಶ್ ಅವರ ಪುತ್ರಿ ಎಂದು ಉಲ್ಲೇಖಿಸಿದ್ದಾರೆ.
ದ್ವಿತೀಯ ಪಿಯುಸಿವರೆಗೂ ಓದಿದ್ದು, ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಜತೆಗೆ ವನ್ಯಜೀವಿ ಛಾಯಾಗ್ರಾಹಕಿ. ದುಬೈನಲ್ಲಿ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದೇನೆ. ವಾಸ್ತುಶಿಲ್ಪಿ ಜತಿನ್ ಹುಕ್ಕೇರಿ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದೇವೆ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…