ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ನಟಿ ರನ್ಯಾ ರಾವ್‌ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಣೆ ಮಾಡಿದ ಆರೋಪದ ಹಿನ್ನೆಲೆ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ರನ್ಯಾ ರಾವ್‌ ಅವರು ದುಬೈನಿಂದ ಬೆಂಗಳೂರಿಗೆ ಸೋಮವಾರ(ಮಾರ್ಚ್‌.3) ರಾತ್ರಿ ಹಿಂದಿರುಗಿದ್ದರು. ಈ ವೇಳೆ ಪ್ರಯಾಣಿಕರನ್ನು ತಪಾಸಣೆ ಮಾಡುವಂತೆ ಇವರನ್ನು ತಪಾಸಣೆ ಮಾಡುವಾಗ ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿದ್ದಾರೆ ಎಂದು ಪತ್ತೆಯಾಗಿದೆ. ಹೀಗಾಗಿ ರನ್ಯಾ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಇನ್ನು ರನ್ಯಾ ಅವರು ವಿದೇಶದಿಂದ 14.8 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ DRI ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಐಪಿಎಸ್‌ ಅಧಿಕಾರಿಯ ಪುತ್ರಿಯಾಗಿದ್ದು, ಕಿಚ್ಚ ಸುದೀಪ ಹಾಗೂ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರೊಂದಿಗೆ ಸ್ಕ್ರೀನ್‌ ಶೇರ್‌ ಮಾಡಿಕೊಂಡಿದ್ದರು.

ವಿಮಾನ ನಿಲ್ದಾಣದಲ್ಲಿ ಗ್ರೀನ್‌ಫಿಲ್ಡ್‌ ಕಾರ್ಗೋ

ರಾಷ್ಟ್ರದಲ್ಲಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆ ಪೂರೈಸುವ ಉದ್ದೇಶದಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ದೇಶದಲ್ಲೇ ದೊಡ್ಡ ಗ್ರೀನ್‌ಫೀಲ್ಡ್‌ ದೇಶೀಯ ಕಾರ್ಗೋ ಟರ್ಮಿನಲ್‌ ಅನ್ನು ಆರಂಭಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ಮೆನ್ಜೀಸ್‌ ಏವಿಯೇಷನ್‌ ಸಹಯೋಗದಲ್ಲಿ ನಿರ್ಮಾಣವಾಗಿರುವ ಕಾರ್ಗೋ ಟರ್ಮಿನಲ್‌ 2 ಲಕ್ಷದ 45 ಸಾವಿರ ಚದರ ಅಡಿ ವಿಸ್ತೀರ್ಣ ಒಳಗೊಂಡಿದೆ. ಇದು ಕೈಗಾರಿಕೆಗಳ ಸಂಪರ್ಕ ಮತ್ತು ಪೂರೈಕೆಯನ್ನು ಬಲಪಡಿಸುವುದಲ್ಲದೇ, ದೇಶದಲ್ಲಿ ಸರಕು ಸಾಗಣೆ ಮತ್ತು ಪ್ರಾದೇಶಿಕ ವ್ಯಾಪಾರದ ಸುಸ್ಥಿರತೆ ಸಾಧಿಸುತ್ತದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

1 hour ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

1 hour ago