ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ
ಅಕ್ರಮವಾಗಿ ಚಿನ್ನ ಸಾಗಣೆಯಲ್ಲಿ ಮಾ.4 ರಂದು ಬಂಧನವಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ ನಟಿಯ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ನಟಿ ರನ್ಯಾ ರಾವ್ ಜೈಲು ಪಾಲಾಗಿದ್ದಾರೆ.
ಇನ್ನು ಈ ಪ್ರಕರಣದ ಎರಡನೇ ಆರೋಪಿ ನಟಿ ರನ್ಯಾ ರಾವ್‌ನ ಗೆಳೆಯ ತರುಣ್ ರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್‌ಐಗೆ ನ್ಯಾಯಾಲಯ ಸೂಚನೆ ನೀಡಿದೆ.





