ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್ ಆದೇಶ ನೀಡಿದೆ.
ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ, 2 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ 2.67 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು ಚಿನ್ನಾಭರಣ ಮತ್ತು ನಗದು ಎಲ್ಲಾ ಸೇರಿ 17.29 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಡಿಆರ್‌ಐ ಅಧಿಕಾರಿಗಳು ರನ್ಯಾ ಬಂಧನ ಬಳಿಕ ಆಕೆಯ ನಿವಾಸವನ್ನು ಪರಿಶೀಲನೆ ಮಾಡಿದ್ದರು. ಆ ನಿವಾಸ ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ನ ಫ್ಲ್ಯಾಟ್ವೊಂದರಲ್ಲಿ ವಾಸವಾಗಿದ್ದರು. ಅಲ್ಲಿ 5ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 3 ದೊಡ್ಡ ಪೆಟ್ಟಿಗೆಯ ನಗದು ಹಣ ಹಾಗೂ ಚಿನ್ನವನ್ನು ವಶಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.





