ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌| ರನ್ಯಾ ರಾವ್‌ ಬಂಧನ: ಚಿನ್ನ, ನಗದು ಸೇರಿ 17.29 ಕೋಟಿ ವಶ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್‌ ಆದೇಶ ನೀಡಿದೆ.

ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ, 2 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ 2.67 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು ಚಿನ್ನಾಭರಣ ಮತ್ತು ನಗದು ಎಲ್ಲಾ ಸೇರಿ 17.29 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಡಿಆರ್​ಐ ಅಧಿಕಾರಿಗಳು ರನ್ಯಾ ಬಂಧನ ಬಳಿಕ ಆಕೆಯ ನಿವಾಸವನ್ನು ಪರಿಶೀಲನೆ ಮಾಡಿದ್ದರು. ಆ ನಿವಾಸ ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್​ನ ಫ್ಲ್ಯಾಟ್​ವೊಂದರಲ್ಲಿ ವಾಸವಾಗಿದ್ದರು. ಅಲ್ಲಿ 5ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 3 ದೊಡ್ಡ ಪೆಟ್ಟಿಗೆಯ ನಗದು ಹಣ ಹಾಗೂ ಚಿನ್ನವನ್ನು ವಶಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಲಾಲ್‌ಬಾಗ್‌ ಮೂಲಕ ಸುರಂಗ ಮಾರ್ಗ ಕೈಬಿಟ್ಟ ಸರ್ಕಾರ: ಎರಡು ಪರ್ಯಾಯ ಮಾರ್ಗಗಳ ಪರಿಶೀಲನೆ!

ಬೆಂಗಳೂರು: ಪರಿಸರವಾದಿಗಳ ವಿರೋಧದ ಬೆನ್ನಲ್ಲೇ ಲಾಲ್‌ಬಾಗ್‌ ಮೂಲಕ ಸುರಂಗ ರಸ್ತೆ ನಿರ್ಮಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಈ ಕುರಿತು…

10 hours ago

ಚುಂಚನಕಟ್ಟೆ ಸಮೀಪ ನಾಲೆಯಲ್ಲಿ ಮೊಸಳೆ ಪ್ರತ್ಯಕ್ಷ: ಬಲೆಹಾಕಿ ಸೆರೆಹಿಡಿದ ತಂಡ!

ಕೆ.ಆರ್‌.ನಗರ: ಇಲ್ಲಿನ ಚುಂಚನಕಟ್ಟೆ ಸಮೀಪದ ಮಾಳನಾಯಕನಹಳ್ಳಿ ಬಳಿ ಚಾಮರಾಜ ಎಡದಂಡೆಯ ಕಿರು ನಾಲೆಯಲ್ಲಿ ಕಾಣಿಸಿಕೊಂಡ ಮೊಸಳೆಯನ್ನು ಸೆರೆಹಿಡಿಯಲಾಗಿದೆ. ಮೊಸಳೆಯನ್ನು ಗಮನಿಸಿದ…

12 hours ago

‘ಸಂವಿಧಾನದ ಹೆಸರಿನಲ್ಲಿ ಪ್ರತ್ಯೇಕ ವೇದಿಕೆ ಸೃಷ್ಟಿಸದಿರಿ’

ಸಂವಿಧಾನ ದಿನಾಚರಣೆ ಹೆಸರಲ್ಲಿ ಮೇಲಾಟಕ್ಕೆ ಪ್ರಗತಿಪರ ಚಿಂತಕರು, ಸಂಸ್ಕೃತಿ ಚಿಂತಕರು, ರೈತರು, ಕಾರ್ಮಿಕರ ಬೇಸರ  ನವೆಂಬರ್ ೨೬ರಂದು ಮೈಸೂರಿನಲ್ಲಿ ಸಂವಿಧಾನ…

14 hours ago

ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಹಿನ್ನಡೆ: ಜಾಮೀನು ರದ್ದು, ಶರಣಾಗಲು 2 ವಾರ ಗಡುವು!

ನವದೆಹಲಿ: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಹಿನ್ನಡೆಯಾಗಿದೆ. ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ನ್ಯಾಯಾಲಯ, ಎರಡು…

15 hours ago

ಓದುಗರ ಪತ್ರ: ಬ್ರೇಕ್ ಬೀಳಬೇಕು ಅತಿಯಾಸೆಗೆ!

ಬ್ರೇಕ್ ಬೀಳಬೇಕು ಅತಿಯಾಸೆಗೆ! ಇಲ್ಲಿಂದಲ್ಲಿಗೆ ಅಲ್ಲಿಂದಿಲ್ಲಿಗೆ ಇನ್ನೆಲ್ಲಿಗೆ ಹೋಗಬೇಕೆಂಬುದು ತಿಳಿಯದೆ ವಿಲವಿಲ ಒzಡಿತು ಕಾಡಾನೆ ಪಡೆ!ಹೊಸದೇನಲ್ಲ ಮಾನವ-ವನ್ಯಜೀವಿಗಳ ಸಂಘರ್ಷ! ಬೆಳೆದಂತೆಲ್ಲ…

16 hours ago

ಓದುಗರ ಪತ್ರ: ಬಸ್‌ಗಳಲ್ಲಿ ಈ ಫಲಕ ಇನ್ನೂ ಇರಬೇಕೆ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಮೊದಲ ಎರಡು ಸೀಟುಗಳಲ್ಲಿ ವಿಧಾನಸಭಾ ಸದಸ್ಯರು ಮತ್ತು ಲೋಕಸಭಾ ಸದಸ್ಯರು ಹಾಗೂ…

16 hours ago