ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿ ಎಚ್ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರನ್ಯಾರಾವ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಮೂಲಕ ನಟಿ ರನ್ಯಾರಾವ್‌ಗೆ ಜೈಲೇ ಗತಿಯಾಗಿದ್ದು, ರನ್ಯಾ ಮುಂದಿನ ನಡೆ ಏನು ಎಂಬುದು ಯಕ್ಷ ಪ್ರಶ್ನೆಯಾಗಿದೆ.