ರಾಜ್ಯ

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ದೊರೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಏ.21ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ.

ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೆ ವಿಶೇಷ ಮೀಸಲಾತಿ ಒದಗಿಸುವ ಈ ವ್ಯವಸ್ಥೆಯು ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯುವ ಸುವರ್ಣಾವಕಾಶವಾಗಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಆನ್‌ಲೈನ್ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು ಇಂತಿವೆ.
– ಕೃಷಿಕ / ಕೃಷಿ ಕೂಲಿ ಕಾರ್ಮಿಕರ ಪ್ರಮಾಣಪತ್ರ (RD ಸಂಖ್ಯೆ ಸಹಿತ)
– ವಂಶವೃಕ್ಷ ಪ್ರಮಾಣಪತ್ರ (ಅವಿಭಾಜ್ಯ ಕುಟುಂಬಕ್ಕೆ)
– ಆದಾಯಕ್ಕೆ ಸಂಬಂಧಿಸಿದ ಅಫಿಡವಿಟ್
– ವೇತನ / ಖಾಸಗಿ ವ್ಯವಹಾರದ ಆದಾಯ ದಾಖಲೆಗಳು

ಏಪ್ರಿಲ್ 29ಕ್ಕೆ ಪ್ರಯೋಗಿಕ ಪರೀಕ್ಷೆ
ದ್ವಿತೀಯ ಪಿಯುಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಕೃಷಿ ಸಂಬಂಧಿತ ಪದವಿಗಳ ಪ್ರವೇಶಕ್ಕೆ ಏಪ್ರಿಲ್ 29ರಂದು ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

ತರಬೇತಿ ಮತ್ತು ಮಾರ್ಗದರ್ಶನ
ಪ್ರಯೋಗಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಸರಿಯಾದ ತರಬೇತಿ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಮಂಡ್ಯದ ಚಿಗುರು ಅಗ್ರಿ ಕೋಚಿಂಗ್ ಸೆಂಟರ್ ನಾಲ್ಕು ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮೈಸೂರು ಮತ್ತು ಮಂಡ್ಯದಲ್ಲಿ ಆಯೋಜಿಸಿದೆ.

ಅಗ್ರಿ ಕೋಚಿಂಗಸ್‌ ಸೆಂಟರ್ ಸಂಸ್ಥೆಯ ಮುಖ್ಯಸ್ಥ ನಾಗೇಶ್ ಸಿ.ಆರ್ ಅವರು ಮಂಡ್ಯದ ವಿ.ಸಿ.ಫಾರಂ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವದೊಂದಿಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುತ್ತಿದ್ದಾರೆ. ತರಬೇತಿಯಲ್ಲಿ ಕೃಷಿಕರ ಕೋಟಾ ದಾಖಲಾತಿ ವಿವರ, ಕ್ಷೇತ್ರ ಭೇಟಿ, ಪರೀಕ್ಷಾ ಮಾದರಿ ಅಭ್ಯಾಸ ಸೇರಿವೆ.

ಈ ತರಬೇತಿಯ ಮೂಲಕ ತಯಾರಾಗಬಹುದಾದ ಕೋರ್ಸ್‌ಗಳು
– B.Sc (Hons.) Agriculture
– B.Sc (Hons.) Horticulture
– B.Sc (Hons.) Forestry
– B.V.Sc & AH (Veterinary Science)

ಕೃಷಿಕರ ಕೋಟಾದಡಿ ದೊರೆಯುತ್ತಿರುವ ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸರಿಯಾದ ದಾಖಲೆಗಳ ಸಿದ್ಧತೆ, ಸಮಯಕ್ಕೆ ಅರ್ಜಿ ಸಲ್ಲಿಕೆ ಮತ್ತು ಪ್ರಯೋಗಿಕ ಪರೀಕ್ಷೆಗೆ ಸಕಾಲದಲ್ಲಿ ತಯಾರಿ ಇವು ಯಶಸ್ಸಿನ ಮುಖ್ಯ ಕೀಲಿಕೈಗಳಾಗಿವೆ. ಹೆಚ್ಚಿನ ಮಾಹಿತಿ ಮತ್ತು ತರಬೇತಿಗಾಗಿ ಸಂಪರ್ಕಿಸಿ 70266 94404

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago