ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದು, ಅವರ ಹೊಸ ಪಕ್ಷಕ್ಕೆ ಶುಭವಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಹಾರೈಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಹೇಳಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಯಾವುದೇ ಒಳ ಒಪ್ಪಂದವಿಲ್ಲ. ಸುಮ್ಮನೇ ವಿವಾದ ಹೆಬ್ಬಿಸುವ ನಿಟ್ಟಿನಲ್ಲಿ ಈ ರೀತಿ ಮಾತನಾಡುತ್ತಾರೆ. ಅವರು ಕಟ್ಟಲು ಮುಂದಾಗಿರುವ ಹೊಸ ಪಕ್ಷಕ್ಕೆ ಶುಭವಾಗಲಿ ಎಂದು ಹೇಳಿದರು.
ಹಾಲಿನ ದರ ಏರಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಹಾಲಿನ ದರ ಏರಿಕೆಯಿಂದ ಸರ್ಕಾರಕ್ಕೇನು ಲಾಭವಿಲ್ಲ. ರೈತರ ಹಿತದೃಷ್ಠಿಯಿಂದ ಏರಿಕೆ ಮಾಡಲಾಗಿದೆ. ಏರಿಕೆ ಆಗಿರುವ 4 ರೂ.ಗಳು ನೇರವಾಗಿ ರೈತರಿಗೆ ಸೇರಲಿದೆ ಎಂದು ತಿಳಿಸಿದರು.





