ಬೆಳಗಾವಿ: ರಾಜ್ಯ ಸರ್ಕಾರವು ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ್ದು, ಕೆಐಎಡಿಬಿ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಯೋಜನೆ ರೂಪಿಸಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲಾಗುವುದು ಎಂದರು.
ಒಂದು ವೇಳೆ ರೈತರೇ ಕೈಗಾರಿಗೆ ಸ್ಥಾಪಿಸಲು ಮುಂದಾದರೆ ಅದಕ್ಕೆ ನಾವು ನೆರವು ನೀಡುವ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.
ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 ಚದರ ಅಡಿ ಜಾಗ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರಗಳು ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಅಭಿವೃದ್ಧಿಪಡಿಸಲಾದ ನಿವೇಶನಗಳನ್ನು ನೀಡುವ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲೂ ರೈತರನ್ನು ಒಳಗೊಳ್ಳುವಂತೆ ಮಾಡಲು ಸೂಕ್ತ ನಿರ್ಧಾರ ರೂಪಿಸಬೇಕಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…