ರಾಜ್ಯ

ರೈತರಿಗೆ ಸಿಹಿಸುದ್ದಿ | ಎಲ್ಲಾ ರೈತರಿಗೆ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ

ಕೃಷಿ ಇಲಾಖೆಯ ಮಹತ್ವದ ಆದೇಶ

ಬೆಂಗಳೂರು : ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದ್ದು, ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಲಿವೆ.

ಕೃಷಿ ಸಚಿವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿಲಿಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದ್ದ 9 ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ-ಆರ್ಕೆವಿವೈ) ಎಂದು ಮರು ನಾಮಕರಣಗೊಳಿಸಿ ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ವ್ಯಾಪ್ತಿಗೆ ಒಳಪಡುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ ಪಿಎಂಕೆಎಸ್ವೈ ಮತ್ತು ಪಿಎಂಎಂಎಸ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ ರೂ.274 ಕೋಟಿ ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಇದರ ಅನುಕೂಲ ತಲುಪಲಿದೆ ಹಾಗೆಯೇ ಟಾಪ್ಅಪ್ ಯೋಜನೆಯಡಿ ರೂ.252 ಕೋಟಿಗಳ ಅನುದಾನವನ್ನು ಸೂಕ್ಷ್ಮ ನೀರಾವರಿ ಸಾಧನ ಸಲಕರಣೆಗಳ ಆರ್ಥಿಕ ನೆರವಿಗಾಗಿ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago