ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಠಡಿಗಳ ದುರಸ್ಥಿಗೆ ೧೦೦ ಕೋಟಿ ರೂ., ಶೌಚಾಲಯ ನಿರ್ಮಾಣಕ್ಕೆ ೯೦ ಕೋಟಿ ರೂ. ಮಂಜೂರಾಗಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕಟ್ಟಡ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ೯೭ ಕೋಟಿ ರೂ. ಮಂಜೂರಾಗಿದೆ ಎಂದರು.
ಇದನ್ನು ಓದಿ: ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ
ಸಚಿವ ಸಂಪುಟ ಸಭೆಯಲ್ಲಿ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಆದ್ಯತೆ ಮೇಲೆ ಈ ಕೆಲಸಗಳನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಶೂ ಮತ್ತು ಸಾಕ್ಸ್ ಗಳಿಗೆ ೧೧೭ ಕೋಟಿ ರೂ. ಹಣ ಒದಗಿಸಲಾಗಿದ್ದು, ಈಗಾಗಲೇ ೯೭ ಕೋಟಿ ರೂ. ವಿತರಣೆಯಾಗಿದೆ. ಎಸ್‌ಡಿಎಂಸಿ ಸಮಿತಿಗೆ ಹಣ ನೀಡಲಿದ್ದು, ಆ ಸಮಿತಿಗಳೇ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಿವೆ. ಶೂ ಮತ್ತು ಸಾಕ್ಸ್ ಗಳಿಗೆ ಹಣದ ಕೊರತೆಯಿಲ್ಲ, ಮಧ್ಯವರ್ತಿಗಳೂ ಇಲ್ಲ. ಒಂದು ವೇಳೆ ಇಲಾಖಾಧಿಕಾರಿಗಳು ತಪ್ಪು ನಿರ್ವಹಣೆ ಮಾಡಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂಚಿತ ನಿಧಿಯ ಹಣವನ್ನು ಬಳಸಲು ಸೂಚಿಸಿಲ್ಲ. ಹಾಗೊಂದು ವೇಳೆ ನಿರ್ದೇಶನ ನೀಡಿದ್ದರೆ ಸಂಬಂಧಿಸಿದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.
ಇದಕ್ಕೂ ಮುನ್ನ ಮಹೇಶ್ ಟೆಂಗಿನಕಾಯಿ, ಶಾಲಾ ಶೈಕ್ಷಣಿಕ ವರ್ಷ ಮುಗಿಯಲು ಇನ್ನು ೩ ತಿಂಗಳು ಮಾತ್ರ ಉಳಿದಿದೆ. ಇನ್ನೂ ಕೂಡ ಶೂ ಮತ್ತು ಸಾಕ್ಸ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…