ಉಡುಪಿ: ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಒಟ್ಟಿಗೆ ಬರುತ್ತದೆ. ಯಾವುದೇ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕಳೆದ ಎರಡು ತಿಂಗಳಿಂದ ಈ ಯೋಜನೆಗಳ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ ಕಾರಣ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಸ್ಪಷ್ಟಪಡಿಸಿದ್ದಾರೆ.
ಹಣ ಬಿಡುಗಡೆ ಹೆಚ್ಚು ಕಮ್ಮಿ ಆಗೋದು ಸಹಜ. ಅಂದ ಮಾತ್ರಕ್ಕೆ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ತಿಳಿದುಕೊಳ್ಳುವುದು ತಪ್ಪು. ಒಂದೆರಡು ದಿನಗಳಲ್ಲಿ ಎರಡು ಯೋಜನೆಯ ಹಣ ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ದಾರೆ.