ಬೆಂಗಳೂರು : ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ತಯಾರಕರು ಮತ್ತು ಸಹಾಯಕರ ಗೌರವಧನವನ್ನು ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಗೌರವಧನವನ್ನು ತಿಂಗಳಿಗೆ ರೂ.1000 ಹೆಚ್ಚಳ ಮಾಡಿದ್ದು, ಕ್ಷೀರಭಾಗ್ಯ ಲೆಕ್ಕಶೀರ್ಷಿಕೆ ಅಡಿ ಈ ಮೊತ್ತವನ್ನು ಭರಿಸಲಾಗುವುದೆಂದು ಹೇಳಲಾಗಿದೆ.
ಗೌರವಧನ ಹೆಚ್ಚಳ ಮಾಡುವುದಾಗಿ 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇದೀಗ ಕ್ರಮವಹಿಸಲಾಗಿದೆ. ಪ್ರಸ್ತುತ ಅಡುಗೆ ತಯಾರಕರು ರೂ.3700 ಹಾಗೂ ಸಹಾಯಕರು ರೂ.3600 ಸಂಭಾವನೆ ಪಡೆಯುತ್ತಿದ್ದು, ಕ್ರಮವಾಗಿ ರೂ.4700 ಹಾಗೂ ರೂ.4600ಕ್ಕೆ ಹೆಚ್ಚಳವಾಗಲಿದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…