ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿವೆ.
ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಎಸ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್‌ಗಳನ್ನು ಸಚಿವರಿಗೆ ಹಸ್ತಾಂತರ ಮಾಡಲಾಗಿದೆ.
ಇದರದಲ್ಲಿ ಒಂದು ಲಕ್ಷ ಮನೆ ಯೋಜನೆ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಬರಲಿದ್ದು, ಇದಕ್ಕಾಗಿ ಉತ್ತಮ ಮಾರುಕಟ್ಟೆ ಇದೆ. ಹೀಗಾಗಿ ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.





