ರಾಜ್ಯ

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್‌ ಸಾಲ ನೀಡುವ ಕುರಿತಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಬ್ಯಾಂಕ್‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿವೆ.

ಬ್ಯಾಂಕ್‌ ಆಫ್‌ ಬರೋಡಾ, ಕೆನರಾ ಬ್ಯಾಂಕ್‌, ಎಸ್‌ ಬ್ಯಾಂಕ್‌, ಇಂಡಿಯನ್‌ ಓವರ್ಸೀಸ್‌ ಬ್ಯಾಂಕ್‌ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್‌ಗಳನ್ನು ಸಚಿವರಿಗೆ ಹಸ್ತಾಂತರ ಮಾಡಲಾಗಿದೆ.

ಇದರದಲ್ಲಿ ಒಂದು ಲಕ್ಷ ಮನೆ ಯೋಜನೆ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಬರಲಿದ್ದು, ಇದಕ್ಕಾಗಿ ಉತ್ತಮ ಮಾರುಕಟ್ಟೆ ಇದೆ. ಹೀಗಾಗಿ ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

1 hour ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

3 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

5 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

9 hours ago