ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೋಮವಾರ ಆದೇಶ ಪ್ರಕಟಿಸಿದೆ.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.
ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.
ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.
ಇದನ್ನೂ ಓದಿ:-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ಗ್ಯೂಸ್ : ವಯೋಮಿತಿ ಸಡಿಲಿಕೆಗೆ ಅಸ್ತು ಎಂದ ಸರ್ಕಾರ
ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.
ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.
ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…