ರಾಜ್ಯ

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ಗ್ಯೂಸ್‌ : ವಯೋಮಿತಿ ಸಡಿಲಿಕೆಗೆ ಅಸ್ತು ಎಂದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೋಮವಾರ ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.

ಇದನ್ನೂ ಓದಿ:-ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ಗ್ಯೂಸ್‌ : ವಯೋಮಿತಿ ಸಡಿಲಿಕೆಗೆ ಅಸ್ತು ಎಂದ ಸರ್ಕಾರ

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago