ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ.
ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಇದರಿಂದ ಒತ್ತಡದ ಕೆಲಸ ಹಾಗೂ ವೈಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಸಲೀಂ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ ಅಽಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿಪಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲೇನಿದೆ?
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.
ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಽಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…