ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ ಆದೇಶ ಹೊರಡಿಸಲಾಗಿದೆ.
ನೂತನ ಆದೇಶವು ಮುಂದಿನ 2026ರ ಜನವರಿ 1ರಿಂದ ಜಾರಿಗೆ ಬರಲಿದೆ. ಸರ್ಕಾರದ ಮಾರ್ಗಸೂಚಿಗಳನ್ನೇ ಅನುಸರಿಸಿ ಈ ರಜೆಯನ್ನು ನೀಡಲಾಗುವುದು ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ . ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ. ಆದೇಶದ ಪ್ರಕಾರ, ತಿಂಗಳಿಗೆ ಒಂದು ದಿನ ಮಾತ್ರ ಋತುಚಕ್ರ ರಜೆ ನೀಡಲಾಗುವುದು. ಇದು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ನೀಡಲಾಗುತ್ತದೆ. ರಜೆಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ದುರ್ಬಳಕೆಯಾಗದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಈ ರಜೆಯನ್ನು ವಾರ್ಷಿಕ ರಜೆ ಅಥವಾ ಇತರ ರಜೆಗಳಿಂದ ಕಡಿತಗೊಳಿಸದೇ ನೀಡಲಾಗುವುದು.
ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ.ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ದಿನಾಂಕ: 01.01.2026 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರು ಮಾಡುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:-ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಋತುಚಕ್ರದ ಸಮಯದಲ್ಲಿ ಮಹಿಳೆಯರು ದೈಹಿಕ ಮತ್ತು ಮಾನಸಿಕ ತೊಂದರೆಗಳನ್ನು ಅನುಭವಿಸುತ್ತಾರೆ. ಇದರಿಂದ ಕೆಲಸದಲ್ಲಿ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಹಲವು ಖಾಸಗಿ ಕಂಪನಿಗಳು ಮತ್ತು ಕೆಲವು ಸರ್ಕಾರಿ ಇಲಾಖೆಗಳು ಋತುಚಕ್ರ ರಜೆ ನೀಡುತ್ತಿವೆ.ಹೀಗಾಗಿ ಕೆಎಸ್ ಆರ್ ಟಿಸಿ ಸಹ ಈ ಕ್ರಮಕ್ಕೆ ಮುಂದಾಗಿದೆ.
ಸಾರಿಗೆ ನಿಗಮದಲ್ಲಿ ಸಾವಿರಾರು ಮಹಿಳಾ ನೌಕರರು ಕೆಲಸ ಮಾಡುತ್ತಿದ್ದಾರೆ. ಕಂಡಕ್ಟರ್, ಡ್ರೈವರ್, ಆಡಳಿತ ಸಿಬ್ಬಂದಿ ಸೇರಿ ಹಲವು ಹುದ್ದೆಗಳಲ್ಲಿ ಮಹಿಳೆಯರು ಇದ್ದಾರೆ. ಅವರಿಗೆ ಈ ರಜೆ ದೊಡ್ಡ ರಿಲೀಫ್ ಆಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹಿಳಾ ನೌಕರರಿಗೆ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ (ಪೀರಿಯಡ್ ಲೀವ್) ನೀಡುವಂತೆ ಆದೇಶ ಹೊರಡಿಸಲಾಗಿದೆ.
ಎಲ್ಲ ಕೈಗಾರಿಕೆಗಳಿಗೂ ಅನ್ವಯ
ರಾಜ್ಯದಲ್ಲಿ ನಾನಾ ಕಾರ್ಮಿಕ ಕಾಯಿದೆಯಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆ ಸೌಲಭ್ಯ ಕಲ್ಪಿಸಿ ಕಳೆದ ನ.12ರಂದು ಸರಕಾರ ಆದೇಶ ಹೊರಡಿಸಿತ್ತು.
ಮಹಿಳೆಯರ ಆರೋಗ್ಯಕ್ಕೆ ಒತ್ತು!
ಋತುಚಕ್ರ ರಜೆಯಿಂದ ಮಹಿಳೆಯರ ಆರೋಗ್ಯಕ್ಕೆ ಒಳ್ಳೆಯದು. ಕೆಲಸದಲ್ಲಿ ಒತ್ತಡ ಕಡಿಮೆಯಾಗಿ ಉತ್ಪಾದಕತೆ ಹೆಚ್ಚಾಗುತ್ತದೆ. ಮಹಿಳಾ ಸಿಬ್ಬಂದಿ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕ್ರಮಗಳು ಅಗತ್ಯವಾಗಿವೆ. ಏSಖಖಿಅಯ ಈ ನಿರ್ಧಾರವನ್ನು ಮಹಿಳಾ ಸಂಘಟನೆಗಳು ಮೆಚ್ಚಿಕೊಂಡಿವೆ. ಇತರ ಸರ್ಕಾರಿ ಇಲಾಖೆಗಳು ಸಹ ಈ ಮಾದರಿ ಅನುಸರಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.
ಸಾರಿಗೆ ನಿಗಮದಲ್ಲಿ ಸುಮಾರು 40,000 ಸಿಬ್ಬಂದಿ ಇದ್ದಾರೆ. ಇದರಲ್ಲಿ ಸಾವಿರಾರು ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಬಸ್ ಕಂಡಕ್ಟರ್, ಡ್ರೈವರ್ ಹುದ್ದೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದೆ. ದೀರ್ಘಕಾಲ ನಿಂತುಕೊಂಡು ಕೆಲಸ ಮಾಡುವ ಅವರಿಗೆ ಋತುಚಕ್ರದ ಸಮಯದಲ್ಲಿ ತೊಂದರೆಯಾಗುತ್ತದೆ. ಈ ರಜೆಯಿಂದ ಅವರಿಗೆ ದೊಡ್ಡ ನೆರವಾಗಲಿದೆ. ವ್ಯವಸ್ಥಾಪಕ ನಿರ್ದೇಶಕರು ಈ ಆದೇಶವನ್ನು ಎಲ್ಲ ಡಿಪೆÇೀಗಳಿಗೆ ಕಳುಹಿಸಿದ್ದಾರೆ. 2026 ಜನವರಿಯಿಂದ ಜಾರಿಗೊಳ್ಳಲಿದೆ. ಮಹಿಳಾ ನೌಕರರು ಈ ರಜೆಯನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದು ಮಹಿಳಾ ಸ್ನೇಹಿ ಕ್ರಮವಾಗಿದ್ದು, ಇತರ ನಿಗಮಗಳು ಸಹ ಅನುಸರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.





