ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ನಡೆಸಿದ ಚರ್ಚೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಘೋಷಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೆ ನೀಡಿ, “ಕೇಂದ್ರ ಸಚಿವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ, ಫೆಬ್ರವರಿ 9ರಿಂದ ಯಾವುದೇ ದರ ಏರಿಕೆ ಇರುವುದಿಲ್ಲ ಎಂದು ಸೂಚಿಸಲಾಗಿದೆ. ಇದು ತಾತ್ಕಾಲಿಕ ಸ್ಥಗಿತವಾಗಿದ್ದು, ದರ ನಿಗದಿ ಸಮಿತಿಯ (Fare Fixation Committee – FFC) ಲೆಕ್ಕಾಚಾರದಲ್ಲಿನ ದೋಷಗಳನ್ನು ಪರಿಶೀಲಿಸಲಾಗುವುದು” ಎಂದು ತಿಳಿಸಿದ್ದಾರೆ.
ಫೆಬ್ರವರಿ 5ರಂದು ಸಚಿವ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ತೇಜಸ್ವಿ, ಹೊಸ ದರ ನಿಗದಿ ಸಮಿತಿ ರಚಿಸಿ, ದರ ಏರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಕೋರಿದರು. ಫೆಬ್ರವರಿ 7ರಂದು ಪೂನಃ ದೂರವಾಣಿ ಮೂಲಕ ಚರ್ಚೆ ನಡೆಸಿ, ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದರು. “ಬೆಂಗಳೂರು ಮೆಟ್ರೋ ದರಗಳು ದೇಶದಲ್ಲೇ ಅತಿ ಹೆಚ್ಚು. ಇನ್ನೊಂದು ಏರಿಕೆ ಸಾಮಾನ್ಯ ಜನರಿಗೆ ಸಾರಿಗೆಯನ್ನು ದುಬಾರಿಯಾಗಿಸುತ್ತದೆ” ಎಂದು ಟೀಕಿಸಿದರು. ರಾಜ್ಯ ಸರ್ಕಾರದ ಕಾಂಗ್ರೆಸ್ ನೇತೃತ್ವವನ್ನು ಟೀಕಿಸಿ, “ರಾಜ್ಯ ಸರ್ಕಾರವೇ ದರ ಏರಿಕೆಗೆ ಕಾರಣ. ‘ಶ್ಯಾಡೋ ಕ್ಯಾಶ್ ಸಪೋರ್ಟ್’ ಹಿಂತೆಗೆದುಕೊಂಡಿದ್ದರಿಂದ ಈ ಸ್ಥಿತಿ ಉಂಟಾಗಿದೆ” ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಪ್ರತಿಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದರ ನಿಗದಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿಲ್ಲ ಎಂದು ಹೇಳಿದ್ದರು. ಆದರೆ ಸಂಸದ ಸೂರ್ಯ ಅವರು ದಾಖಲೆಗಳನ್ನು ತೋರಿಸಿ, ರಾಜ್ಯದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳೇ ದರ ಏರಿಕೆಗೆ ಒತ್ತಾಯಿಸಿದ್ದಾಗಿ ಆರೋಪಿಸಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…
ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…
ನಂಜನಗೂಡು : ಮಾರ್ಚ್ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…