ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ.
ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ.
ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್‌ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.
2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು. ಮಲ್ಟಿಪ್ಲೆಕ್ಸ್‌ಗಳಲ್ಲಿ ಎಗ್ಗಿಲ್ಲದೇ ಏರಿಕೆ ಆಗುತ್ತಿದ್ದ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…