Mysore
20
few clouds

Social Media

ಮಂಗಳವಾರ, 20 ಜನವರಿ 2026
Light
Dark

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: 2,000 ಹೊಸ ಬಸ್‌ ಖರೀದಿಗೆ ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2,000 ಹೊಸ ಬಸ್‌ಗಳನ್ನು ಖರೀದಿಸಲು ಚಿಂತನೆ ನಡೆಸಿದ್ದು, ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!