ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2,000 ಹೊಸ ಬಸ್‌ಗಳನ್ನು ಖರೀದಿಸಲು ಚಿಂತನೆ ನಡೆಸಿದ್ದು, ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…