ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಪಾಸ್ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಇದನ್ನು ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ: ಪೋಷಕರ ಆಕ್ರೋಶ
ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ಬಳಿಕ ನಿರ್ಧಾರ ಮಾಡುತ್ತೇವೆ. ಎಲ್ಲಾ ವಿಷಯಗಳಿಗೆ ನಿಗದಿ ಮಾಡಿರುವ ಉತ್ತೀರ್ಣ ಅಂಕ 35ನ್ನು 33ಕ್ಕೆ ಇಳಿಸುವ ಬಗ್ಗೆ ಚರ್ಚಿಸಲು ಸಾರ್ವಜನಿಕ ವಲಯಕ್ಕೆ ಬಿಟ್ಟಿದ್ದೇವೆ.
ಅದರಲ್ಲಿ ಸುಮಾರು 701 ಮಂದಿ 33 ಅಂಕಗಳ ಪರವಾಗಿಯೂ ಹಾಗೂ 35ರ ಪರವಾಗಿ ಕೇವಲ 8 ಅಭಿಪ್ರಾಯಗಳು ಬಂದವು. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದ ನಮ್ಮ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ನಾಳೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…