ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2026 ಜನವರಿ 1ರಿಂದ ಅನ್ವಯವಾಗುವಂತೆ ಪ್ರಸ್ತುತ ಮೂಲವೇತನದ ಶೇ.14.25ರಿಂದ ಶೇ.15.75ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರಿ ನೌಕರರು ಕಳೆದ ಹಲವು ದಿನಗಳಿಂದ ವೇತನ ಪರಿಷ್ಕರಣೆ ಮಾಡುವ ಸಂಬಂಧ ವೇತನ ಆಯೋಗ ರಚನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕರಣೆ ಮಾಡಿರುವುದು ವಿಶೇಷವಾಗಿದೆ.
ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅಸ್ತು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಘದ ಪರವಾಗಿ ರಾಜ್ಯಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೇ. 1.50ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಸಂತಸದ ವಿಷಯ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಸಮಸ್ತ ನೌಕರರ ಪರವಾಗಿ ಧನ್ಯವಾದ ಅರ್ಪಿಸುತ್ತೇವೆ ಎಂದು ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…